ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 9,22,958 ಅರ್ಜಿಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.
ಈವರೆಗಿನ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26977 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 6590 ಶಾಶ್ವತ ವಲಸೆ ಹಾಗೂ 17,774 ಮರಣ ಹೊಂದಿದ ಪ್ರಕರಣಗಳು, 2367 ದ್ವಿಪ್ರತಿಗಳು ಸೇರಿವೆ ಎಂದು ತಿಳಿಸಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%







