ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸೋಮವಾರ ವಿವಿಧ ಬೂತ್‌ಗಳಿಗೆ ಭೇಟಿ ನೀಡಿ ಕಾರ್ಯ ಪ್ರಗತಿ ಪರಿಶೀಲಿಸಿದರು.
ದಕ್ಷಿಣ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 48ರ ಕಂಕನಾಡಿ–ವೆಲೆನ್ಸಿಯಾದ ಬೂತ್ ಸಂಖ್ಯೆ 187ಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್, ಮತದಾರರೊಂದಿಗೆ ಸಂವಾದ ನಡೆಸಿ ಎಸ್‌ಐಆರ್ ಅಭಿಯಾನದ ಮಹತ್ವ ಹಾಗೂ ಉದ್ದೇಶವನ್ನು ವಿವರಿಸಿದರು.
ಎಲ್ಲಾ ಮತದಾರರು ಎನ್ಯುಮರೇಷನ್ ಫಾರಂಗಳನ್ನು ಅಂತಿಮ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಭರ್ತಿ ಮಾಡಿ ಸಲ್ಲಿಸಬೇಕು. ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಳ್ಳಲಿದೆ ಎಂದರು.
ಫಾರಂ ಭರ್ತಿ ಮಾಡುವ ವೇಳೆ ಯಾವುದೇ ತಾಂತ್ರಿಕ ಅಥವಾ ಇತರ ಸಮಸ್ಯೆಗಳು ಎದುರಾದರೆ, ಪಕ್ಷದ ನಿಯೋಜಿತ ಏಜೆಂಟರು ಹಾಗೂ ಕಾರ್ಯಕರ್ತರ ನೆರವು ಪಡೆದು ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರವೀಣ್ ನಿಡ್ಡೇಲ್, ಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಬಿಜೆಪಿ ಪ್ರಮುಖರಾದ ಕೃತಿಕ್ ಉಜ್ಜೋಡಿ, ರೂಪಾ, ದಯಾನಂದ, ರಾಮಚಂದ್ರ, ಗೀತಾ ಸೇರಿದಂತೆ ಹಲವರು ಇದ್ದರು.
What do you feel about this post?
Like
Love
Happy
Haha
Sad







