ಸುರತ್ಕಲ್: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆ ಮಾಡಿರುವ ಘಟನೆ ಚೊಕ್ಕಬೆಟ್ಟು ಮಠದ ಭಾನುವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿ ಆಗಿದೆ.
ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದ್ದು, ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಎಚ್.ಎನ್., ಪಣಂಬೂರು ಉಪ ವಿಭಾಗದ ಎಸಿಪಿ ಶ್ರೀಕಾಂತ್, ಸುರತ್ಕಲ್ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%







