ಬಂಟ್ವಾಳ ಬಸ್ ದುರಂತ: ಮೃತ ಬಾಲಕಿಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ, ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ: ಸಚಿವ ಖಾದರ್ ಸೂಚನೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಳೆ ಸುದ್ದಿ ರಾಜ್ಯ ಶಿರಸಿ

Spread the love

ಬಂಟ್ವಾಳ: ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರವೊಂದು ಬಿದ್ದು ಬಾಲಕಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

<

ಅಮೆರಿಕದ ಚಿಕಾಗೋ ಪ್ರವಾಸದಲ್ಲಿರುವ ಸಚಿವರು ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದಾರೆ.

ಅದೇ ವೇಳೆ, ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಂಪೂರ್ಣ ವೈದ್ಯಕೀಯ ಚಿಕಿತ್ಸೆ ಹಾಗೂ ಆರೈಕೆಯನ್ನು ಸರ್ಕಾರದ ವತಿಯಿಂದ ಯಾವುದೇ ಕೊರತೆಯಾಗದಂತೆ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮೃತ ಬಾಲಕಿಯ ಕುಟುಂಬದ ದುಃಖದಲ್ಲಿ ಸರ್ಕಾರ ಭಾಗಿಯಾಗಿದ್ದು, ಗಾಯಾಳು ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲಿ ಎಂದು ಸಚಿವರು ಹಾರೈಸಿದ್ದಾರೆ.

ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಬುಧವಾರ ಖಾಸಗಿ ಶಾಲಾ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಮರವೊಂದು ಬಸ್ ಮೇಲೆ ಉರುಳಿಬಿದ್ದ ಪರಿಣಾಮ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಬಾಲಕಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *