ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಸಂಸ್ಥಾಪಕರೊಬ್ಬರಲ್ಲಿ ಒಬ್ಬರಾಗಿದ್ದರು. ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಎಂ. ದೇವದಾಸ್ ಅವರು ಹೃದಯಾಘಾತದಿಂದ ನಿಧನರಾದರು. ಅವರ ನಿಧನಕ್ಕೆ ಸಾಮಾಜಿಕ, ದಲಿತಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಂ. ದೇವದಾಸ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಬೆಳೆಸುವಲ್ಲಿ ದೇವದಾಸ್ ಅವರು ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹಲವು ದಶಕಗಳಿಂದ ಹೋರಾಟ ನಡೆಸಿದ್ದ ಅವರು, ರಾಜ್ಯದಾದ್ಯಂತ ಸಂಘಟನೆ ಬಲಪಡಿಸುವಲ್ಲಿ ಇವರು ಪ್ರಮುಖ ಕೊಡುಗೆ ನೀಡಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಮಂಗಳೂರಿನ ಬಜ್ಪೆ ಸಿದ್ದಾರ್ಥ ನಗರದಲ್ಲಿ ಇರುವ ಅವರ ನಿವಾಸದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ 4 ಗಂಟೆಗೆ ಸಿದ್ದಾರ್ಥ ನಗರದಲ್ಲೇ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಅಪಾರ ನಷ್ಟ ಉಂಟಾಗಿದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
What do you feel about this post?
Like
Love
Happy
Haha
Sad







