ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿಮುನ್ನೆಚ್ಚರಿಕೆಯಾಗಿ ಜುಲೈ 23 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ ಶಾಲೆಗಳು, ಪದವಿಪೂರ್ವ, ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತದ ಆದೇಶ ಉಲ್ಲಂಘನೆ ಮಾಡಿ ಶಾಲೆ ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%







