ಬೆಂಗಳೂರು: ಕೆಪಿಸಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ವೇಳೆ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆಯಲಾದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.
ಪ್ರತಿಭಟನೆ ವೇಳೆ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಕೆಲವರ ಮೇಲೆ ಡೊಣ್ಣೆ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ವೇಳೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಪಕ್ಷ ನಾಯಕ ಆರ್. ಅಶೋಕ್, “ಕಾಂಗ್ರೆಸ್ ಕಚೇರಿಯಲ್ಲಿ ಮೊಟ್ಟೆ ಹಾಗೂ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲಾಗಿತ್ತು. ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ” ಎಂದು ಆರೋಪಿಸಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%







