ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದೇಶ ವಿದೇಶ ರಾಜಕೀಯ ರಾಜ್ಯ ಶಿಕ್ಷಣ

Spread the love

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆ ವೇಳೆ ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುವಾಗ ಕೆಲ ಸಿಬ್ಬಂದಿಯೇ “ಈ ಸರ್ಕಾರವನ್ನು ಕಿತ್ತೊಗೆಯಿರಿ” ಎಂದು ಕಿವಿಯಲ್ಲಿ ಪಿಸುಗುಟ್ಟಿದ್ದರು ಎಂದು ಅವರು ನವದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

<

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗವನ್ನು ಖಂಡಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದರು.

ಕಳೆದ ಹತ್ತು ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದು, ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಹಾಗೂ ಕುಟುಂಬಗಳು ತೊಂದರೆ ಅನುಭವಿಸಿದ್ದರೂ ಯಾರಿಗೂ ಶಿಕ್ಷೆಯಾಗಿಲ್ಲ ಎಂದು ರಾಹುಲ್ ಆರೋಪಿಸಿದರು. ಶಿಕ್ಷಣ ವ್ಯವಸ್ಥೆ ವಾಣಿಜ್ಯೀಕರಣಗೊಂಡಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *