ಬೆಂಗಳೂರು: ರಾಜ್ಯ ಸರಕಾರ ಮೂರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಮಿಷನರ್ ಆಗಿದ್ದ ರವಿಕುಮಾರ್ ಎಂ.ಆರ್. ಅವರನ್ನು ಕೋಲಾರ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಕೆಎಸ್‍ಎಂಎಸ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಅವರನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಎ. ಆರ್. ರವಿ ಅವರನ್ನು ಕೆಎಸ್‍ಎಂಎಸ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
What do you feel about this post?
0%
Like
0%
Love
0%
Happy
0%
Haha
0%
Sad
0%







