ಸ್ಕ್ಯಾನಿಂಗ್ ಸೆಂಟರ್‌ಗಳ ಸಮಗ್ರ ಪರಿಶೀಲನೆ ಕಡ್ಡಾಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಆರೋಗ್ಯ ಕಾರವಾರ ರಾಜ್ಯ ಶಿರಸಿ

Spread the love

ಕಾರವಾರ: ಜಿಲ್ಲೆಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ (ಪಿಸಿಪಿಎನ್‌ಡಿಟಿ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನೋಂದಾಯಿತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

<

ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಪಿಸಿಪಿಎನ್‌ಡಿಟಿ) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 82 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೂ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಶೀಲನೆ ವೇಳೆ ಕೇಂದ್ರದಲ್ಲಿನ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸುವುದರ ಜೊತೆಗೆ, ಯಾವುದೇ ರೀತಿಯ ಗರ್ಭಧಾರಣಾ ಪೂರ್ವ ಅಥವಾ ಪ್ರಸವ ಪೂರ್ವ ಲಿಂಗ ಪತ್ತೆ ನಡೆಸಲಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಪರಿಶೀಲನೆ ನಡೆಸಿದ ಪ್ರತಿ ಸಂದರ್ಭದಲ್ಲೂ ಜಿಪಿಎಸ್ ಆಧಾರಿತ ಛಾಯಾಚಿತ್ರಗಳನ್ನು ಸಂಗ್ರಹಿಸಿ, ಸಮಗ್ರ ವರದಿ ಸಿದ್ಧಪಡಿಸಿ ದೃಢೀಕರಣದೊಂದಿಗೆ ಸಲ್ಲಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕ್ರಿಮ್ಸ್‌ ಸ್ತ್ರೀರೋಗ ತಜ್ಞ ಡಾ. ನರೇಶ್ ಪಾವಸ್ಕರ್, ಸದಸ್ಯರಾದ ಕ್ರಿಮ್ಸ್‌ ಮಕ್ಕಳ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ. ಪವನ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ. ಶಿವಕುಮಾರ್, ವಕೀಲೆ ಸುಧಾರಾಣಿ, ಸಾಮಾಜಿಕ ಕಾರ್ಯಕರ್ತೆ ಯಶೋಧ ಹೆಗಡೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರಕರ್, ರೇಡಿಯಾಲಜಿಸ್ಟ್ ಡಾ. ಆಶಿತಾ ಹಾಗೂ ರೋಟರಿ ಕ್ಲಬ್‌ನ ಹೇಮ್ಲಾ ಅಲ್ಫಾನ್ಸೋ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸದಸ್ಯರು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *