ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ, ರವಿ ಶೆಟ್ಟಿ ಸಾವು

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉದ್ಯಮಿ ರವಿ ಶೆಟ್ಟಿ ಅವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ತಿರುಪತಿಯಿಂದ ಮಂತ್ರಾಲಯಕ್ಕೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ರಾತ್ರಿ 2. 30 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

<

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರವಿ ಶೆಟ್ಟಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಂತ್ರಾಲಯ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರೆಸಿದ್ದಾರೆ.
ರವಿ ಶೆಟ್ಟಿ ಅವರ ಅಕಾಲಿಕ ನಿಧನದ ಸುದ್ದಿ ಮಂಗಳೂರಿನ ಉದ್ಯಮ ವಲಯ ಹಾಗೂ ಕುಟುಂಬಸ್ಥರು ಹಾಗೂ ಪರಿಚಯಸ್ಥರಲ್ಲಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *