ನೀಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿಗೆ ಉತ್ತಮ ಸಾಧನೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ

Spread the love

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಫಲಿತಾಂಶದಲ್ಲಿ ಮೂಡುಬಿದಿರೆ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಕಾಲೇಜಿನ ನಿಖಿಲ್ ಎಸ್.ಎಸ್. 720 ಕ್ಕೆ 650 ಅಂಕ ಗಳಿಸಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಿಳಿಸಿದ್ದಾರೆ.

<

ನಿಖಿಲ್ ಅವರ ಬಳಿಕ ತನ್ಮಯಿ ಎ. ಕೋಟಿ 647, ಚಿನ್ಮಯಿ ಬೆಳ್ಳೂರು 629, ಹೇಮಾ ಯು. 624, ಶ್ಲೋಕ್ ರಾಘವೇಂದ್ರ ರಾವ್ 615, ಈಶ್ವರ ಪುಂಡಲೀಕಪ್ಪ ಕೊಪ್ಪಲ್ 612 ಹಾಗೂ ಮೋಹಿತ್ ವೈ.ಪಿ. 611 ಅಂಕಗಳನ್ನು ಪಡೆದು ಕಾಲೇಜಿನ ಸಾಧನೆಗೆ ಮೆರುಗು ತಂದಿದ್ದಾರೆ ಎಂದರು.

ಈ ಬಾರಿ ಕಾಲೇಜಿನ 7 ವಿದ್ಯಾರ್ಥಿಗಳು 600ಕ್ಕೂ ಅಧಿಕ, 32 ವಿದ್ಯಾರ್ಥಿಗಳು 550ಕ್ಕೂ ಅಧಿಕ, 70 ವಿದ್ಯಾರ್ಥಿಗಳು 500ಕ್ಕೂ ಅಧಿಕ ಹಾಗೂ 124 ವಿದ್ಯಾರ್ಥಿಗಳು 450ಕ್ಕೂ ಅಧಿಕ ಅಂಕ ಗಳಿಸಿದ್ದಾರೆ. ವಿಶೇಷವೆಂದರೆ, 216 ವಿದ್ಯಾರ್ಥಿಗಳು 400 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಉತ್ತಮ ಅವಕಾಶ ಪಡೆದುಕೊಂಡಿದ್ದಾರೆ ಎಂದರು.

ಸಂಸ್ಥೆಯ ವಿದ್ಯಾರ್ಥಿಗಳು ಪ್ರತಿವರ್ಷ ದೇಶದ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿರುವುದು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. ಈ ಬಾರಿಯ ನೀಟ್ ಫಲಿತಾಂಶವೂ ಅದಕ್ಕೆ ಮತ್ತೊಂದು ಉತ್ತಮ ಉದಾಹರಣೆ ಆಗಿದೆ ಎಂದರು.

ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ ಹಾಗೂ ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ. ಈ ಫಲಿತಾಂಶದ ಮೂಲಕ ದೇಶದ ಪ್ರಮುಖ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ವಿಶ್ವಾಸವಿದೆ ಎಂದರು.

ವಿದ್ಯಾರ್ಥಿಗಳ ಸಾಧನೆಯನ್ನು ಯುವರಾಜ್ ಜೈನ್, ರಶ್ಮಿತಾ ಜೈನ್, ಪ್ರಶಾಂತ್ ಹೆಗ್ಡೆ, ರಾಮಮೂರ್ತಿ, ಪುಷ್ಪರಾಜ್, ಸಂಪತ್ ಕುಮಾರ್ ಡಿ.ಪಿ., ದಯಾನಂದ್, ಸುನಾದ್ ರಾಜ್, ತೇಜಸ್ವಿ ಭಟ್, ಉಪನ್ಯಾಸಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *