ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಜಿಲ್ಲಾ ಸುದ್ದಿ ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

<

ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ 200 ವಿದ್ಯಾರ್ಥಿಗಳು ಕ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುವ ಅವಕಾಶ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ವೈದ್ಯಕೀಯ ಶಿಕ್ಷಣದ ವಿಸ್ತರಣೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಪರಿಣತ ವೈದ್ಯರನ್ನು ರೂಪಿಸುವಲ್ಲಿ ಈ ನಿರ್ಧಾರ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

2026-27ನೇ ಸಾಲಿನಿಂದ ಬಿ.ಎಸ್‌ಸಿ ಅನಸ್ಥೀಷಿಯಾ ಮತ್ತು ಆಪರೇಷನ್ ಥಿಯೇಟರ್ ಟೆಕ್ನಾಲಜಿ ವಿಭಾಗದಲ್ಲಿ 30 ಸೀಟುಗಳು ಹಾಗೂ ಬಿ.ಎಸ್‌ಸಿ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ ವಿಭಾಗದಲ್ಲಿ 30 ಸೀಟುಗಳೊಂದಿಗೆ ಅಲೈಡ್ ಹೆಲ್ತ್ ಸೈನ್ಸಸ್ ಕೋರ್ಸ್‌ಗಳನ್ನೂ ಆರಂಭಿಸಲಾಗಿದೆ. ಈ ಹೊಸ ಕೋರ್ಸ್‌ಗಳಿಗೆ ಈಗಾಗಲೇ ಏಳು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವೈದ್ಯಕೀಯ ಹಾಗೂ ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವ ನಿಟ್ಟಿನಲ್ಲಿ ಈ ಕ್ರಮ ಮಹತ್ವದ್ದಾಗಿದೆ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *