ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ 500 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್ಎಸ್ಎಲ್ಸಿ ಅಂಕಗಳ ಆಧಾರದ ಮೇಲೆ ನಿರ್ಧರಿಸಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಹಾಗೂ ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬಹುದು ಎಂದರು.
ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ)ಗಳಿಗೆ ಹಾಗೂ ಮೂವರು ಎನ್ಐಟಿಕೆ ಸುರತ್ಕಲ್ಗೆ ಆಯ್ಕೆಯಾಗಿರುವುದು ಶಿಕ್ಷಣದ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ. ಎಐಐಎಂಎಸ್, ಐಐಟಿ, ಎನ್ಐಟಿ ಸೇರಿದಂತೆ ದೇಶದ ಪ್ರತಿಷ್ಠಿತ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿಗೆ ಎಕ್ಸಲೆಂಟ್ ವಿದ್ಯಾರ್ಥಿಗಳು ನಿರಂತರವಾಗಿ ಆಯ್ಕೆಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ನೀಟ್ ಪರೀಕ್ಷೆಯಲ್ಲಿ 500ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ರಾಮಮೂರ್ತಿ, ತೇಜಸ್ವಿ ಭಟ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.
ಪುಷ್ಪರಾಜ್ ಸ್ವಾಗತಿಸಿದರು. ವಾದಿರಾಜ ಕಲ್ಲೂರಾಯ ನಿರೂಪಿಸಿದರು.
What do you feel about this post?
Like
Love
Happy
Haha
Sad







