ಉ. ಕದಲ್ಲಿ 11.05 ಲಕ್ಷ ಎನ್ಯುಮರೇಷನ್ ಫಾರ್ಮ್‌ಗಳ ಗಣಕೀಕರಣ ಪೂರ್ಣ: ಡಿಸಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೆ 11,05,024 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.

<

ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರು ಇದ್ದು, ಪ್ರತಿಯೊಬ್ಬ ಮತದಾರರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಫಾರ್ಮ್‌ಗಳ ಡಿಜಿಟಲ್ ದಾಖಲಾತಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಮನೆ ಮನೆ ಭೇಟಿಯ ವೇಳೆ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 82,836 ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ 30,694 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು, 39,521 ಮಂದಿ ಮೃತಪಟ್ಟಿರುವುದು ಹಾಗೂ 9,460 ದ್ವಿಪ್ರತಿ ಮತದಾರರ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿಯನ್ನು ಸಂಪೂರ್ಣ ನಿಖರ ಹಾಗೂ ಪಾರದರ್ಶಕವಾಗಿ ಸಿದ್ಧಪಡಿಸುವ ಉದ್ದೇಶದಿಂದ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಜಿಲ್ಲಾಡಳಿತ ಮತ್ತು ಚುನಾವಣಾ ಇಲಾಖೆ ವ್ಯವಸ್ಥಿತವಾಗಿ ನಡೆಸುತ್ತಿದ್ದು, ಉಳಿದಿರುವ ಎನ್ಯುಮರೇಷನ್ ಫಾರ್ಮ್‌ಗಳ ಗಣಕೀಕರಣ ಹಾಗೂ ಪರಿಶೀಲನಾ ಪ್ರಕ್ರಿಯೆಯೂ ಶೀಘ್ರ ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *