ಕದ್ರಿ ಮಂಜುನಾಥ ದೇವಸ್ಥಾನ: 29 ರಂದು ಗುರುಪೂರ್ಣಿಮೆ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ಐತಿಹಾಸಿಕ ಪ್ರಸಿದ್ದಿಯ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಇದೇ 29 ರಂದು ಗುರುಪೂರ್ಣಿಮೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

<

ಗುರುಪೂರ್ಣಿಮೆಯ ಪವಿತ್ರ ದಿನದ ಅಂಗವಾಗಿ ಬೆಳಗ್ಗಿನಿಂದಲೇ ವಿಶೇಷ ಪೂಜಾ ಕೈಂಕರ್ಯಗಳು, ರುದ್ರಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಮಧ್ಯಾಹ್ನ 11.30ಕ್ಕೆ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ ಹಾಗೂ ಶ್ರೀ ಚೌರಂಗಿನಾಥ ಗುರುಗಳಿಗೆ ವಿಶೇಷ ಗುರುಪೂಜೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಶ್ರೀ ಮಂಜುನಾಥ ದೇವರಿಗೆ ಏಕಾದಶ ರುದ್ರಾಭಿಷೇಕವೂ ವೈಭವದಿಂದ ಸಂಪನ್ನಗೊಳ್ಳಲಿದೆ.

ಗುರುಪೂರ್ಣಿಮೆ ಹಿಂದೂ ಸಂಪ್ರದಾಯದಲ್ಲಿ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಈ ಶುಭ ಸಂದರ್ಭದಲ್ಲಿ ಶ್ರೀ ಮಂಜುನಾಥ ದೇವರ ದಿವ್ಯ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಮಹಾಪ್ರಸಾದ ಸ್ವೀಕರಿಸುವ ಮೂಲಕ ಪುಣ್ಯಫಲ ಪಡೆಯುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *