ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಅ. 1 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಯಲ್ಲಿ ಇನ್ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ನದಿಗಳು, ಹಳ್ಳಗಳು, ತಗ್ಗು ಪ್ರದೇಶಗಳು ಮತ್ತು ಸಮುದ್ರ ತೀರಗಳಿಗೆ ತೆರಳಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವುದರಿಂದ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ.
ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ 1077 ಸಹಾಯವಾಣಿ ಅಥವಾ 0824-2442590 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬೇಕು. ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆ ನೀಡುವ ಮುಂದಿನ ಸೂಚನೆಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.
What do you feel about this post?
Like
Love
Happy
Haha
Sad





