ಎಸ್‌ಐಆರ್‌ಗೆ ಸ್ವೀಪ್ ಜಾಗೃತಿ ಟಚ್ ಅಪ್, 40 ಸಾವಿರಕ್ಕೂ ಅಧಿಕ ಜನರು ನೇರ ಭಾಗಿ: ಡಿಸಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿಕ್ಷಣ ಶಿರಸಿ

Spread the love

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಹಮ್ಮಿಕೊಂಡ ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, 40 ಸಾವಿರಕ್ಕೂ ಅಧಿಕ ಮಂದಿ ನೇರವಾಗಿ ಭಾಗವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

<

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಆರ್ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ, ಬೀಚ್ ಕ್ಲೀನ್-ಅಪ್, ಮಹಿಳೆಯರಿಗೆ ಆತ್ಮರಕ್ಷಣೆ ಕಾರ್ಯಾಗಾರ, ಚುನಾವಣಾ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಸೇರಿದಂತೆ ಹಲವು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲೇ ಅತ್ಯಧಿಕ ಡಿಜಿಟಲೈಸೇಶನ್ ಸಾಧಿಸಿದ ಜಿಲ್ಲೆಗಳಲ್ಲಿ ಒಂದಾಗಿದ್ದು, ಮನೆಮನೆಗೆ ವಿತರಿಸಿದ್ದ ಎನ್ಯುಮರೇಷನ್ ಫಾರ್ಮ್‌ಗಳಲ್ಲಿ ಶೇ.91ರಷ್ಟು ಫಾರ್ಮ್‌ಗಳನ್ನು ಅಧಿಕಾರಿಗಳು ಯಶಸ್ವಿಯಾಗಿ ಹಿಂಪಡೆದಿದ್ದಾರೆ. ಇವುಗಳ ಆಧಾರದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ವಿಳಾಸ ಬದಲಾವಣೆ, ಮರಣ ಹಾಗೂ ಗೈರುಹಾಜರಾತಿಯಿಂದ ಸುಮಾರು ಶೇ.8ರಷ್ಟು ಹೆಸರುಗಳು ಪಟ್ಟಿಯಿಂದ ಹೊರಗುಳಿಯಲಿದ್ದು, ಕರಡು ಪಟ್ಟಿ ಪ್ರಕಟವಾದ ಬಳಿಕ ಒಂದು ತಿಂಗಳ ಕಾಲ ಆಕ್ಷೇಪಣೆ ಹಾಗೂ ಹಕ್ಕು ಮಂಡಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಸುಮಾರು ಮೂರನೇ ಒಂದು ಭಾಗದ ಕೆಲಸ ಪೂರ್ಣಗೊಂಡಿದ್ದು, ಮುಂದಿನ ಹಂತದಲ್ಲಿ ಸಾರ್ವಜನಿಕರಿಗೆ ನೋಟಿಸ್‌ಗಳು ಬಂದರೂ ಆತಂಕಪಡುವ ಅಗತ್ಯವಿಲ್ಲ. ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಅರ್ಹರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಮುಂದುವರಿಯಲಿವೆ. ಯಾವುದೇ ಪರಿಶೀಲನೆ ನಡೆಸದೆ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ ಮಾತನಾಡಿ, ಸ್ವೀಪ್ ಕಾರ್ಯಕ್ರಮಗಳಲ್ಲಿ ಶಾಲಾ ಮಕ್ಕಳು, ಯುವಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿ ಯಶಸ್ಸಿಗೆ ಕಾರಣರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಎಸ್‌ಐಆರ್ ಅಂಗವಾಗಿ ಸ್ವೀಪ್ ಸಮಿತಿ ಆಯೋಜಿಸಿದ್ದ ಚೆಸ್, ರಂಗೋಲಿ, ಭಿತ್ತಿಚಿತ್ರ, ಭಾಷಣ ಸ್ಪರ್ಧೆ, ಕ್ರಿಕೆಟ್ ಪಂದ್ಯಾವಳಿ ಹಾಗೂ ಸಂವಾದ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *