ಬ್ರಹ್ಮಾವರ: ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಆರೂರು ಹಾಲೆಕಟ್ಟೆ ವೃತ್ತದಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾಗಳು ಹಾಗೂ ನಿಯಂತ್ರಣ ಕೊಠಡಿಯನ್ನು ಭಾನುವಾರ ಉದ್ಘಾಟಿಸಲಾಯಿತು.
ವಿಷ್ಣುಮೂರ್ತಿ ಯುವಕ ಮಂಡಲ ಆರೂರು ನೇತೃತ್ವದಲ್ಲಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ದಾನಿಗಳ ಸಹಕಾರದೊಂದಿಗೆ ಈ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಿಸಿ ಕ್ಯಾಮೆರಾ ವ್ಯವಸ್ಥೆಗೆ ಚಾಲನೆ ನೀಡಿದರೆ, ಉಡುಪಿ ವಕೀಲ ಆರೂರು ಸುಕೇಶ್ ಶೆಟ್ಟಿ ನಿಯಂತ್ರಣ ಕೊಠಡಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ, ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಕುಲಾಲ್, ನೀಲಮ್ಮ ಚಾರಿಟೇಬಲ್ ಟ್ರಸ್ಟ್‌ನ ಆರೂರು ತಿಮ್ಮಪ್ಪ ಶೆಟ್ಟಿ, ಆರೂರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷ ರತ್ನಾಕರ ಭಟ್, ಉದ್ಯಮಿ ಶ್ರೀಧರ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಹರೀಶ್ ಶೆಟ್ಟಿ ಚೇರ್ಕಾಡಿ, ಚಂದ್ರಶೇಖರ್ ಕಲ್ಕೂರ, ಶ್ರೀ ವಿಷ್ಣುಮೂರ್ತಿ ಯುವಕ ಮಂಡಲದ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.
ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗುರುರಾಜ್ ರಾವ್ ಪ್ರಾಸ್ತಾವಿಕ ಮಾತನಾಡಿದರು. ವಿಷ್ಣುಮೂರ್ತಿ ಯುವಕ ಮಂಡಲದ ಅಧ್ಯಕ್ಷ ಸಿಎ ಅಶ್ವತ್ ಶೆಟ್ಟಿ ಸ್ವಾಗತಿಸಿದರು. ಯಾದವ್ ಸೇರಿಗಾರ್ ನಿರೂಪಿಸಿ, ವಿಷ್ಣು ಪ್ರಸಾದ್ ವಂದಿಸಿದರು.
What do you feel about this post?
Like
Love
Happy
Haha
Sad





