ರಾಜ್ಯದಲ್ಲಿ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ ಮತ್ತು ಮಲೆನಾಡಿಗೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ಮಳೆ ಸುದ್ದಿ ರಾಜ್ಯ ಶಿರಸಿ

Spread the love

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆ ಆಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಕುರಿತು ಮುನ್ಸೂಚನೆ ನೀಡಿದ್ದು, ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಕೆ ನೀಡಿದೆ.

<

ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರೊಂದಿಗೆ ಕರಾವಳಿ ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆಯಿದೆ. ಹಾಗೆಯೇ, ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಗಾಳಿ ಸಹಿತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *