ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆಗಳು, ಅಂಗನವಾಡಿಗಳು ಹಾಗೂ ಕೆಲವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅ. 4ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ ಮತ್ತು ಉಳ್ಳಾಲ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗ ವ್ಯಾಪ್ತಿಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಶಾಲೆ-ಕಾಲೇಜುಗಳು ಸೇರಿದಂತೆ) ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
What do you feel about this post?
Like
Love
Happy
Haha
Sad



