ಮಂಗಳೂರು: ನಗರದ ಎಕ್ಕೂರು ಅಯ್ಯಪ್ಪ ಭಜನಾ ಮಂದಿರದ ಹಿಂಭಾಗದ ಕೆಲವು ಮನೆಗಳಿಗೆ ಡ್ರೈನೇಜ್ ಸಮಸ್ಯೆಯಿಂದ ಉಂಟಾಗುತ್ತಿರುವ ತೊಂದರೆ ಕುರಿತು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳ ಸಭೆ ನಡೆಯಿತು.
ಸಭೆಯಲ್ಲಿ ಸ್ಥಳೀಯರ ಪರವಾಗಿ ಮಾತನಾಡಿದ ಎಕ್ಕೂರು ನಿವಾಸಿ ತನುಜಾ, ಡ್ರೈನೇಜ್ ಸಮಸ್ಯೆಯಿಂದ ಹತ್ತಾರು ಮನೆಗಳ ನಿವಾಸಿಗಳು ಎದುರಿಸುತ್ತಿರುವ ಸಂಕಷ್ಟವನ್ನು ವಿವರಿಸಿದರು. ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದ್ದು, ಶಾಶ್ವತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದರು.
ಸ್ಥಳೀಯರ ಅಹವಾಲು ಆಲಿಸಿದ ಶಾಸಕ ವೇದವ್ಯಾಸ ಕಾಮತ್, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಸೂಚಿಸಿದರು. ಸಾರ್ವಜನಿಕರಿಗೆ ಮತ್ತಷ್ಟು ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ (ಅಭಿವೃದ್ಧಿ) ನರೇಶ್ ಶೆಣೈ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಿವಲಿಂಗಪ್ಪ, ಸಹಾಯಕ ಎಂಜಿನಿಯರ್ ಪ್ರಿಯಾಂಕ ಹಾಗೂ ಕುಡ್ಸೆಂಪ್ ಅಧಿಕಾರಿಗಳಾದ ಜಯಪ್ರಕಾಶ್, ಸುರೇಶ್, ಶಿವರಾಮ್, ಸಂಪತ್, ವೆಂಕಟರಮಣ ಸೇರಿದಂತೆ ಸ್ಥಳೀಯರು ಇದ್ದರು.
What do you feel about this post?
Like
Love
Happy
Haha
Sad





