ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

<

ಜುಲೈ ತಿಂಗಳಲ್ಲಿ ರಾಜ್ಯದ 134 ಶಾಲೆ ಮತ್ತು ಕಾಲೇಜುಗಳ ಆವರಣ ಹಾಗೂ ಸುತ್ತಲಿನ ಆಹಾರ ಮಳಿಗೆಗಳಲ್ಲಿ ವಿಶೇಷ ಪರಿಶೀಲನಾ ಅಭಿಯಾನ ನಡೆಸಲಾಗಿದೆ. ಪರಿಶೀಲನೆ ವೇಳೆ ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ, ನೈರ್ಮಲ್ಯ, ಲೇಬಲಿಂಗ್, ಅವಧಿ ಮೀರಿದ ಉತ್ಪನ್ನಗಳ ಮಾರಾಟ ಹಾಗೂ ಪರವಾನಗಿ ಮತ್ತು ನೋಂದಣಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದರು.

ಪರಿಶೀಲನೆಯ ವೇಳೆ ಸಂಶಯಾಸ್ಪದವಾಗಿ ಕಂಡು ಬಂದ 53 ಆಹಾರ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ರಾಜ್ಯ ಆಹಾರ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಬಂದ ಬಳಿಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006 ಹಾಗೂ ನಿಯಮಗಳು–2011ರ ಅನ್ವಯ ಸಂಬಂಧಪಟ್ಟ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಶಾಲೆ–ಕಾಲೇಜು ಆಡಳಿತ ಮಂಡಳಿಗಳು, ಆಹಾರ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಆರೋಗ್ಯಕರ ಆಹಾರ ಪದ್ಧತಿ ಕುರಿತು ಜಾಗೃತಿ ಮೂಡಿಸುವಂತೆ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ವಿಶೇಷ ಪರಿಶೀಲನಾ ಅಭಿಯಾನಗಳನ್ನು ಮುಂದುವರಿಸಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *