ಮಕ್ಕಳಿಗಾಗಿ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ; 25 ಸಾವಿರ ಪ್ರಥಮ ಬಹುಮಾನ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು

Spread the love

ಮಂಗಳೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಲ್ಲಿ ದೇಶಪ್ರೇಮ, ಸೃಜನಶೀಲತೆ ಮತ್ತು ಕಲಾತ್ಮಕ ಅಭಿವ್ಯಕ್ತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮಂಗಳೂರಿನ ರೋಹನ್ ಕಾರ್ಪೊರೇಶನ್ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗಿದೆ.

<

ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಸ್ಪರ್ಧಿಗಳು ಸ್ವಾತಂತ್ರ್ಯೋತ್ಸವ ವಿಷಯಾಧಾರಿತ ಚಿತ್ರವನ್ನು ರಚಿಸಿ ಆಗಸ್ಟ್ 10ರೊಳಗೆ ರೋಹನ್ ಕಾರ್ಪೊರೇಶನ್‌ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿರುವ ಲಿಂಕ್ ಅಥವಾ ಕ್ಯೂಆರ್ ಕೋಡ್ ಮೂಲಕ ಅಪ್‌ಲೋಡ್ ಮಾಡಬೇಕು. ಮನೆ ಅಥವಾ ಶಾಲೆಯಿಂದಲೇ ಚಿತ್ರ ಸಲ್ಲಿಸಲು ಅವಕಾಶವಿದ್ದು, ಬಂದಿರುವ ಚಿತ್ರಗಳ ಪೈಕಿ ಅತ್ಯುತ್ತಮ 60 ಚಿತ್ರಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧೆಯ ಅಧಿಕೃತ ತೀರ್ಪುಗಾರರ ಸಹಭಾಗಿಯಾಗಿ ಪಿಕ್ಸ್‌ನ್ಸಿಲ್ ಸಂಸ್ಥೆ ಕಾರ್ಯನಿರ್ವಹಿಸಲಿದೆ.

ಅಂತಿಮ ಸುತ್ತು ಆಗಸ್ಟ್ 13ರಂದು ಮಂಗಳೂರಿನ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಲಿದೆ. ಅಂತಿಮ ಸುತ್ತಿನ ವಿಷಯವನ್ನು ಒಂದು ದಿನ ಮುಂಚಿತವಾಗಿ ಪ್ರಕಟಿಸಲಾಗುತ್ತಿದ್ದು, ಸ್ಪರ್ಧೆಗೆ ಅಗತ್ಯವಿರುವ ಎಲ್ಲಾ ಚಿತ್ರಕಲಾ ಸಾಮಗ್ರಿಗಳನ್ನು ಆಯೋಜಕರೇ ಒದಗಿಸಲಿದ್ದಾರೆ.

ವಿಜೇತರಿಗೆ ಪ್ರಥಮ ರೂ.25 ಸಾವಿರ, ದ್ವಿತೀಯ ರೂ.15 ಸಾವಿರ ಹಾಗೂ ತೃತೀಯ ರೂ.10 ಸಾವಿರ ನಗದು ಬಹುಮಾನ ನೀಡಲಾಗುತ್ತದೆ. ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ ಎಲ್ಲ ಸ್ಪರ್ಧಿಗಳಿಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು.

ರೋಹನ್ ಕಾರ್ಪೊರೇಶನ್ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೇರೊ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ, ದೇಶಪ್ರೇಮ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ವೇದಿಕೆಯಾಗುವ ಉದ್ದೇಶದಿಂದ ಈ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ನಿರ್ದೇಶಕ ಡಿಯೋನ್ ಮೊಂತೇರೊ ಮಾತನಾಡಿ, ಇದು ಕೇವಲ ಸ್ಪರ್ಧೆಯಲ್ಲ; ಮಕ್ಕಳ ಕಲ್ಪನೆ ಮತ್ತು ಚಿಂತನೆಗೆ ಗೌರವ ಸಲ್ಲಿಸುವ ವೇದಿಕೆಯಾಗಿದ್ದು, ಕಲೆಯ ಮೂಲಕ ಸಮಾಜ ಮತ್ತು ರಾಷ್ಟ್ರದ ಕುರಿತ ತಮ್ಮ ದೃಷ್ಟಿಕೋನವನ್ನು ಅಭಿವ್ಯಕ್ತಿಸಲು ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು.

ಪೋಷಕರು ತಮ್ಮ ಮಕ್ಕಳ ಚಿತ್ರಗಳನ್ನು ಆಗಸ್ಟ್ 10ರೊಳಗೆ ಸಲ್ಲಿಸಬಹುದಾಗಿದೆ. ಅಂತಿಮ ಸುತ್ತಿಗೆ ಆಯ್ಕೆಯಾದವರಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9035511821 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *