ಸಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಯ ಪರಿಶೀಲನೆಗಾಗಿ ಶಿರಸಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಬನವಾಸಿ ಸೇರಿದಂತೆ ತಮ್ಮ ಕ್ಷೇತ್ರದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಕುರಿತು ಸಚಿವರ ಗಮನ ಸೆಳೆದರು. ಕೃಷಿ ಬೆಳೆಗಳು, ರಸ್ತೆ, ಸೇತುವೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದ್ದು, ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸುವುದರ ಜೊತೆಗೆ ಹಾನಿಗೊಳಗಾದ ಕಾಮಗಾರಿಗಳ ದುರಸ್ತಿಯನ್ನು ತುರ್ತಾಗಿ ಕೈಗೊಳ್ಳುವಂತೆ ಮನವಿ ಮಾಡಿದರು.
ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಮತ್ತು ಸಾರ್ವಜನಿಕರಿಗೆ ಸರ್ಕಾರದ ನೆರವು ಶೀಘ್ರ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಹಿತಾಸಕ್ತಿಯನ್ನು ಕಾಪಾಡುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಪ್ರಕೃತಿ ವಿಕೋಪದಿಂದ ಸಂಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಸರ್ಕಾರದ ನೆರವು ತ್ವರಿತವಾಗಿ ದೊರೆಯುವಂತೆ ನಿರಂತರವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.
ಶಾಸಕರಾದ ಭೀಮಣ್ಣ ನಾಯ್ಕ್, ಶಿವರಾಂ ಹೆಬ್ಬಾರ್ ಸೇರಿದಂತೆ ಹಲವರು ಇದ್ದರು.
ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ, ಸಿಇಒ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad





