ಬೀದರ್: ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿ ಸುರೇಖಾ ಅವರನ್ನು ನೇಮಕ ಮಾಡಿ ಸರ್ಕಾರದ ಅಧಿನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್ ಅವರು ಆದೇಶ ಹೊರಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯ ಉಪ ಕಾರ್ಯದರ್ಶಿಯಾಗಿದ್ದ ಸುರೇಖಾ ಅವರನ್ನು ಬೀದರ್ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೀದರ್ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿದ್ದ ಶಿವಾನಂದ್ ಕರಾಳೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸುರೇಖಾ ಅವರು ಬೀದರ್ ವಿಶ್ವವಿದ್ಯಾಲಯದ ಕುಲಸಚಿವೆ ಆಗಿ ಕೂಡ ಕೆಲಸ ಮಾಡಿದ್ದರು.
What do you feel about this post?
0%
Like
0%
Love
0%
Happy
0%
Haha
0%
Sad
0%





