ಪಡುಬಿದ್ರೆ: ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್ ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಪ್ರಸನ್ನ ಅವರ ನೇತೃತ್ವದ ತಂಡ ಕರೆತರುತ್ತಿದ್ದ ವೇಳೆ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಆತ್ಮರಕ್ಷಣೆಗಾಗಿ ಕಾಪು ಉಪನಿರೀಕ್ಷಕ ತೇಜಸ್ವಿ ಅವರು ಪಿಸ್ತೂಲ್‌ನಿಂದ ಆರೋಪಿ ರಾಜು ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಉಪನಿರೀಕ್ಷಕ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡಿರುವ ಉಪನಿರೀಕ್ಷಕ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದರು.
ಮುದರಂಗಡಿಯಲ್ಲಿ ನಡೆದಿದ್ದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.
What do you feel about this post?
Like
Love
Happy
Haha
Sad





