ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಅಪರಾಧ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ.

<

ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ.

ಗಂಭೀರ ಗಾಯಗೊಂಡಿದ್ದ ಡೇವಿಡ್ ಡಿಸೋಜ ಅವರನ್ನು ಕೂಡಲೇ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಳಿಕ, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಗಂಭೀರ ಸ್ಥಿತಿಯಲ್ಲಿದ್ದ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನೆ ಮಾಹಿತಿ ತಿಳಿದ ತಕ್ಷಣವೇ ಶಿರ್ವ ಮತ್ತು ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಂದು ಪರಿಶೀಲನೆ ನಡೆಸಿದರು. ಸೋಕೋ ತಂಡ ಹಾಗೂ ಶ್ವಾನದಳದಿಂದಲೂ ಘಟನಾ ಸ್ಥಳಕ್ಕೆ ಬಂದು ತನಿಖೆ ನಡೆಸಿದೆ. ಫಾರೆನ್ಸಿಕ್ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್, ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಕಾಪು ಇನ್ ಸ್ಪೆಕ್ಟರ್ ಅಜ್ಮತ್ ಅಲಿ, ಶಿರ್ವ ಠಾಣಾಧಿಕಾರಿ ಸಕ್ತಿವೇಲು ಪರಿಶೀಲನೆ ನಡೆಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *