ಮಂಗಳೂರು: ದೇಶದ ರಕ್ಷಣೆಗೆ ಸೇವೆ ಸಲ್ಲಿಸಿದ ಕುಲಾಲ ಸಮುದಾಯದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವ ವಿಶೇಷ ಸಮಾರಂಭವು ಆಗಸ್ಟ್ 9ರಂದು ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ ಯತೀಶ್ ಕುಮಾರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕುಲಾಲ ಸಮುದಾಯಕ್ಕೆ ಸೇರಿದ 60ಕ್ಕೂ ಅಧಿಕ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. 9 ರಂದು ಬೆಳಿಗ್ಗೆ 11.30ಕ್ಕೆ ಕದ್ರಿ ಬಂಜನ್ ಚಾವಡಿಯಲ್ಲಿ ನಡೆವ ಕಾರ್ಯಕ್ರಮದ ಉದ್ದೇಶ, ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧರ ಕೊಡುಗೆಯನ್ನು ಸ್ಮರಿಸುವುದರ ಜತೆಗೆ ಕ್ಷೇತ್ರದ ನಾಗದೇವರು ಹಾಗೂ ದೈವ-ದೇವರ ಅನುಗ್ರಹವನ್ನು ಅವರಿಗೆ ಕೋರುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಧಾಕೃಷ್ಣ ಬಂಜನ್ ಮಹಾ ಪ್ರಾಯೋಜಕರಾಗಿದ್ದು, ಮೈಸೂರಿನ ಹಿಲ್ ಸೈಡ್ ಆರ್ಕಿಟೆಕ್ಟ್ ಸಂಸ್ಥೆ ಸಹಕಾರ ನೀಡುತ್ತಿದೆ. ಪ್ರಧಾನ ಅತಿಥಿಗಳಾಗಿ ನಿವೃತ್ತ ಬಿಎಸ್‌ಎಫ್ ಕಮಾಂಡೆಂಟ್ ಹಾಗೂ ಕರ್ನಾಟಕ ರಾಜ್ಯ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಅಧ್ಯಕ್ಷ ಡಿ. ಚಂದಪ್ಪ ಮೂಲ್ಯ, ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದ ಅಧ್ಯಕ್ಷ ಸುಂದರ್ ಮೂಲ್ಯ, ಬ್ರಾಹ್ಮಕಲಸ ಸಮಿತಿ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಹಾಗೂ ನಿವೃತ್ತ ಡಿಜಿಎಂ, ಬಿಎಸ್‌ಎನ್‌ಎಲ್‌ನ ಐತಪ್ಪ ಮೂಲ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಧಾನ ಸಂಘಟಕ ಯತೀಶ್ ಕುಮಾರ್ ಮಾತನಾಡಿ, ದೇಶಸೇವೆಗೆ ಅಮೂಲ್ಯ ಕೊಡುಗೆ ನೀಡಿದ ನಿವೃತ್ತ ಯೋಧರು ಹಾಗೂ ವೀರ ನಾರಿಯರನ್ನು ಗೌರವಿಸುವುದು ಸಮಾಜದ ಹೆಮ್ಮೆಯ ವಿಚಾರವಾಗಿದೆ. ಅವರ ಸೇವೆಯನ್ನು ಸ್ಮರಿಸುವುದರೊಂದಿಗೆ ಯುವಪೀಳಿಗೆಗೆ ದೇಶಸೇವೆಯ ಪ್ರೇರಣೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ನಾಯಬ್‌ಗಳಾದ ಮೋಹನ್ ಕಡಂಬಾರ, ಗೋಪಾಲ್ ಎನ್. ಕುಲಾಲ್ ಇದ್ದರು.
What do you feel about this post?
Like
Love
Happy
Haha
Sad




