11.23 ಲಕ್ಷ ಎಣಿಕೆ ನಮೂನೆಗಳ ಗಣಕೀಕರಣ: ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಇದುವರೆಗೆ ಜಿಲ್ಲೆಯಾದ್ಯಂತ 11,23,004 ಎಣಿಕೆ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

<

ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬ ಮತದಾರರಿಗೂ ಎಣಿಕೆ ನಮೂನೆಗಳನ್ನು ವಿತರಿಸಲಾಗಿದೆ. ಮನೆ ಮನೆ ಭೇಟಿ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,033 ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದರಲ್ಲಿ 45,580 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಪ್ರಕರಣಗಳು, 44,011 ಮರಣ ಹೊಂದಿದ ಮತದಾರರ ಪ್ರಕರಣಗಳು ಹಾಗೂ 12,601 ದ್ವಿಪ್ರತಿ ಪ್ರಕರಣಗಳು ಸೇರಿವೆ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *