ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಜಿಲ್ಲಾ ಸುದ್ದಿ ಅಪರಾಧ ಉಡುಪಿ ಕುಂದಾಪುರ ರಾಜ್ಯ

Spread the love

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ.

<

ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಮನವಿಯನ್ನು ಪರಿಗಣಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.

ಆರೋಪಿಗಳ ವಿಚಾರಣೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *