ಉ. ಕದಲ್ಲಿ 11.23 ಲಕ್ಷ ಎನ್ಯುಮರೇಷನ್‌ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯ 12,30,037 ಮತದಾರರಿಗೆ ಎನ್ಯುಮರೇಷನ್‌ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ ಇದುವರೆಗೆ 11,23,024 ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

<

ಮನೆಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆ ವೇಳೆ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,013 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,558 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವವರು, 44,006 ಮಂದಿ ಮೃತಪಟ್ಟಿರುವವರು ಹಾಗೂ 12,616 ದ್ವಿಪ್ರತಿ ಮತದಾರರ ಪ್ರಕರಣಗಳು ಸೇರಿವೆ ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಖಚಿತಪಡಿಸುವುದು ಹಾಗೂ ಅನರ್ಹ ಹೆಸರುಗಳನ್ನು ನಿಯಮಾನುಸಾರ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *