ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ; ದರ್ಶನ್‌ಗೆ ಮತ್ತಷ್ಟು ಸಂಕಷ್ಟ?

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಷ್‌, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆದಿದೆ. ಅರ್ಜಿಯನ್ನು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನ್ಯಾಯಾಲಯ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

<

ವಿಡಿಯೊ ಸಂವಾದದ ಮೂಲಕ ನಟ ದರ್ಶನ್‌, ಪವಿತ್ರಾ ಗೌಡ, ಪ್ರದೋಷ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಜಗದೀಶ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.

ಹಿಂದಿನ ವಿಚಾರಣೆಯಲ್ಲಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದಕ್ಕೆ ಪ್ರಾಸಿಕ್ಯೂಷನ್‌ ಷರತ್ತುಬದ್ಧ ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಪ್ರಕರಣದ ಇತರ ಆರೋಪಿಗಳ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ದರ್ಶನ್‌ ಪರ ವಕೀಲ ಹಸ್ಮತ್‌ ಪಾಷಾ, ಈ ಪ್ರಕರಣದಲ್ಲಿ ಸಾಕ್ಷಿಗಳ ಕೊರತೆ ಇಲ್ಲ ಎಂದು ಸ್ವತಃ ಪ್ರಾಸಿಕ್ಯೂಷನ್‌ ಹೇಳಿದೆ. ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳಿರುವಾಗ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಅಗತ್ಯವೇನು ಎಂದು ಪ್ರಶ್ನಿಸಿದ್ದರು.

ಮಾಫಿ ಸಾಕ್ಷಿಯನ್ನು ಪರಿಗಣಿಸುವ ಪ್ರಾಸಿಕ್ಯೂಷನ್‌ ನಿಲುವಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದೇ ವೇಳೆ ಪ್ರದೋಷ್‌ ಅವರ ಮಾಫಿ ಸಾಕ್ಷಿ ಅರ್ಜಿಗೆ ಸಂಬಂಧಿಸಿದಂತೆ ದರ್ಶನ್‌ ಸೇರಿದಂತೆ ಇತರ ಆರೋಪಿಗಳ ವಾದವನ್ನೂ ಆಲಿಸಬೇಕು ಎಂದು ಸಲ್ಲಿಸಲಾಗಿದ್ದ ಮನವಿಯನ್ನು ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.

ಆದರೆ ಪ್ರದೋಷ್‌ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯನ್ನು ಪರಿಗಣಿಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ನ್ಯಾಯಾಲಯ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ.

ಪ್ರದೋಷ್‌ ಸಲ್ಲಿಸಿರುವ ಅರ್ಜಿಯನ್ನು ಕಾನೂನಿನ ನಿಯಮಗಳ ಅನ್ವಯ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದ್ದಾರೆ.

ಮಾಫಿ ಸಾಕ್ಷಿ ಅರ್ಜಿಯನ್ನು ಪರಿಗಣಿಸುವ ಕುರಿತು ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಅರ್ಜಿಗೆ ನ್ಯಾಯಾಲಯ ಒಪ್ಪಿಗೆ ನೀಡಿದರೆ, ಪ್ರಕರಣದ ಮುಂದಿನ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಅದರ ಪರಿಣಾಮ ಮಹತ್ವದ್ದಾಗುವ ಸಾಧ್ಯತೆಯಿದೆ. ಪ್ರದೋಷ್‌ ಅವರ ಹೇಳಿಕೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಗಳು ಇತರ ಆರೋಪಿಗಳ ವಿರುದ್ಧದ ವಿಚಾರಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತವೆ ಎಂಬುದು ಮುಂದಿನ ಹಂತದಲ್ಲಿ ನಿರ್ಧಾರವಾಗಲಿದೆ.

ಹೀಗಾಗಿ ನ್ಯಾಯಾಲಯ ಪ್ರದೋಷ್‌ ಅವರ ಮಾಫಿ ಸಾಕ್ಷಿ ಅರ್ಜಿಯ ಕುರಿತು ಹೊರಡಿಸಲಿರುವ ಪ್ರತ್ಯೇಕ ಆದೇಶದತ್ತ ಇದೀಗ ಪ್ರಕರಣದ ಎಲ್ಲರ ಗಮನ ನೆಟ್ಟಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *