ಅಡ್ಯಾರಿನಲ್ಲಿ ವನಮಹೋತ್ಸವಕ್ಕೆ ಚಾಲನೆ: ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ

Spread the love

ಮಂಗಳೂರು: ಪರಿಸರ ಸಂರಕ್ಷಣೆಯ ಜತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಅಡ್ಯಾರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವನಮಹೋತ್ಸವ ಹಾಗೂ ಗೃಹ ಜ್ಯೋತಿ ಫಲಾನುಭವಿಗಳ ಶಿಬಿರ ನಡೆಯಿತು.

<

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಅಡ್ಯಾರು ಗ್ರಾಮ ಪಂಚಾಯಿತಿಯ ಜಂಟಿ ಆಶ್ರಯದಲ್ಲಿ ಸೋಮವಾರ ನಡೆದ ಕಾರ್ಯಕ್ರಮಕ್ಕೆ ಕೆಪಿಸಿಸಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು.

2 ಸಾವಿರಕ್ಕೂ ಅಧಿಕ ಗಿಡ ನೆಟ್ಟಿದ್ದೇನೆ: ಇನಾಯತ್ ಅಲಿ

ಕಾರ್ಯಕ್ರಮದಲ್ಲಿ ಮಾತನಾಡಿದ ಇನಾಯತ್ ಅಲಿ, ವನಮಹೋತ್ಸವ ತಮ್ಮ ಪಾಲಿಗೆ ಅತ್ಯಂತ ಪ್ರೀತಿಯ ಕಾರ್ಯಕ್ರಮವಾಗಿದ್ದು, ಗಿಡಗಳನ್ನು ನೆಡುವುದರಲ್ಲಿ ವಿಶೇಷ ಸಂತೋಷವಿದೆ ಎಂದು ಹೇಳಿದರು.

ತಮ್ಮ ತೋಟದಲ್ಲಿ ಈಗಾಗಲೇ ವಿವಿಧ ಜಾತಿಯ ಸುಮಾರು 2,000 ಗಿಡಗಳನ್ನು ನೆಟ್ಟಿರುವುದಾಗಿ ತಿಳಿಸಿದ ಅವರು, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

ಬಡವರಿಗೂ ತಲುಪಬೇಕು ಗ್ಯಾರಂಟಿ ಯೋಜನೆಗಳ ಪ್ರಯೋಜನ

ಸರ್ಕಾರದ ಗ್ಯಾರಂಟಿ ಯೋಜನೆಗಳು ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿವೆ. ಸರ್ಕಾರದ ಹಣ ಕೇವಲ ಉಳ್ಳವರ ಪಾಲಾಗದೆ ಬಡವರು ಹಾಗೂ ಅರ್ಹ ಫಲಾನುಭವಿಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಇನಾಯತ್ ಅಲಿ ಹೇಳಿದರು.

ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ವ್ಯವಸ್ಥೆ ಇರುವುದರಿಂದ ಯಾವುದೇ ಲಂಚದ ವ್ಯವಹಾರಕ್ಕೆ ಅವಕಾಶವಿಲ್ಲ. ಇದೇ ಗ್ಯಾರಂಟಿ ಯೋಜನೆಗಳ ಪ್ರಮುಖ ವಿಶೇಷತೆಯಾಗಿದೆ ಎಂದರು.

ಯುವ ಸಂಘಟನೆಗಳಿಗೆ 10 ಲಕ್ಷ ಅನುದಾನ

ಭಾರತ್ ಜೋಡೋ ಯುವ ಸಂಘಟನೆಗಳ ರಚನೆಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಯುವಜನರಲ್ಲಿ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿಯೊಂದು ಸಂಘಟನೆಗೆ ₹10 ಲಕ್ಷ ಅನುದಾನ ನೀಡಲು ಸರ್ಕಾರ ಮುಂದಾಗಿದೆ. ಯುವಜನತೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಬಿ. ಕಂಬಳಿ, ಆಡಳಿತಾಧಿಕಾರಿ ಶಿವಣ್ಣ, ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ ಅಸಫ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಫೀಕ್, ನವಾಜ್, ನೀತು, ಜಯಂತಿ ಸೇರಿದಂತೆ ಹಲವರು ಇದ್ದರು. ರಾಜ್ ಕುಮಾರ್ ಶೆಟ್ಟಿ ನಿರೂಪಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *