ಬೆಂಗಳೂರು: ರಾಜಕೀಯ ಪ್ರತಿಷ್ಠೆಯ ತಿಕ್ಕಾಟದ ಬಳಿಕ ಸಚಿವ ಸಂಪುಟ ವಿಸ್ತರಣೆ ನಂತರ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ.
ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಯು.ಟಿ.ಖಾದರ್ಗೆ ಆರೋಗ್ಯ ಇಲಾಖೆ ಜತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ನೀಡಲಾಗಿದೆ.
ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ ಖಾತೆಯನ್ನು ವಹಿಸಿಲಾಗಿದೆ. ವಾಲ್ಮೀಕಿ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದ ಬಿ.ನಾಗೇಂದ್ರ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಖಾತೆ ಲಭಿಸಿದೆ. ಈ ಬಗ್ಗೆ ಲೋಕಭವನದಿಂದ ಅಧಿಕೃತವಾಗಿ ಮಾಹಿತಿ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಚಿವರಿಗೆ ಹಂಚಿಕೆ ಮಾಡಲಾದ ಖಾತೆಗಳ ವಿವರ
ಯು.ಟಿ. ಖಾದರ್ – ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಟಿ. ರಘುಮೂರ್ತಿ – ಪರಿಶಿಷ್ಠ ವರ್ಗಗಳ ಕಲ್ಯಾಣ
ಡಾ.ಅಜಯ್ ಸಿಂಗ್ – ಸಣ್ಣ ನೀರಾವರಿ ಮತ್ತು ಐಟಿ-ಬಿಟಿ
ಚಲುವರಾಯಸ್ವಾಮಿ – ಬೃಹತ್ ಮತ್ತು ಮಧ್ಯಮ ನೀರಾವರಿ
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
ಜಮೀರ್ ಅಹ್ಮದ್ – ವಸತಿ
ರಾಮಲಿಂಗಾರೆಡ್ಡಿ – ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
ಲಕ್ಷ್ಮಣ ಸವದಿ – ಸಹಕಾರ, ಕೃಷಿ ಮಾರುಕಟ್ಟೆ
ರುದ್ರಪ್ಪ ಮಾನಪ್ಪ ಲಮಾಣಿ – ಸಕ್ಕರೆ ಮತ್ತು ಜವಳಿ
ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ
ಶಿವಲಿಂಗೇಗೌಡ – ಅಬಕಾರಿ
ಪುಟ್ಟರಂಗ ಶೆಟ್ಟಿ – ಪಶುಸಂಗೋಪನೆ ಮತ್ತು ರೇಷ್ಮೆ
ವಿಜಯಾನಂದ ಕಾಶಪ್ಪನವರ್ – ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ
ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
ಕೆ.ಎಸ್. ಬಸವಂತಪ್ಪ – ಮುಜರಾಯಿ , ಮೀನುಗಾರಿಕೆ, ಬಂದರು ಜಲಸಾರಿಗೆ
ಎಸ್.ಎಸ್. ಮಲ್ಲಿಕಾರ್ಜುನ – ಗಣಿ & ಭೂ ವಿಜ್ಞಾನ, ತೋಟಗಾರಿಕೆ
ರಿಜ್ವಾನ್ ಆರ್ಷದ್ – ಆಹಾರ ಮತ್ತು ನಾಗರಿಕ
ನರೇಂದ್ರಸ್ವಾಮಿ – ಕೃಷಿ
ಎಚ್.ಸಿ. ಬಾಲಕೃಷ್ಣ – ಪೌರಾಡಳಿತ
ಬಿ. ನಾಗೇಂದ್ರ – ಯೋಜನೆ ಮತ್ತು ಸಾಂಖ್ಯಿಕ
ಕೆ.ಎಚ್. ಮುನಿಯಪ್ಪ – ಸಮಾಜ ಕಲ್ಯಾಣ
What do you feel about this post?
Like
Love
Happy
Haha
Sad





