ಕಾರವಾರ: ಮಂತ್ರಿ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಶಾಸಕ ಮಂಕಾಳ ವೈದ್ಯ ಅವರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವುದಕ್ಕೆ ಮುಂದಾಗಿದ್ದು, ಅವರ ಮುನಿಸಿಗೆ ತುಪ್ಪ ಸವರಲು ಸಿಎಂ ಡಿಕೆಶಿ ಮುಂದಾಗಿದ್ದಾರೆ.
ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಂಕಾಳ ವೈದ್ಯರಿಗೆ ಡಿಕೆಶಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಉತ್ಸಾಹದಲ್ಲಿ ಇದ್ದವರಿಗೆ ಕೊನೆ ಗಳಿಗೆಯಲ್ಲಿ ಮಂತ್ರಿ ಮಂಡಳದ ಪಟ್ಟಿಯಿಂದಲೇ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು.
ಇದರಿಂದಾಗಿ ಮುನಿಸಿಕೊಂಡು ಜಿಲ್ಲೆ ಉಸ್ತುವಾರಿ ಲಕ್ಷ್ಮಣ ಸವದಿ ಬಂದಾಗಲೂ ಅಂತರವನ್ನು ಕಾಯ್ದುಕೊಂಡಿದ್ದರು. ಜಿಲ್ಲೆಯಲ್ಲಿ ನಾಲ್ಕು ಮಂದಿ ಶಾಸಕರು ಇದ್ದಾಗಲು ಸಚಿವ ಸ್ಥಾನ ನೀಡದೇ ಕಡೆಗಣಿಸಲಾಗಿದೆ ಎಂದು ಮಂಕಾಳು ವೈದ್ಯ ಹಾಗೂ ಅವರ ಬೆಂಬಲಿತ ಕಾರ್ಯಕರ್ತರಲ್ಲಿ ಆಕ್ರೋಶ ಮಡುಗಟ್ಟಿತ್ತು. ಆದರೆ ಈಗ ಅವರ ಹೆಸರು ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ಮಂಚೂಣಿಯಲ್ಲಿದೆ. ಮುಖ್ಯಮಂತ್ರಿ ಡಿಕೆಶಿ ಹಾಗೂ ಪಕ್ಷದ ನಾಯಕರು ಹಾಗೂ ಹೈಕಮಾಂಡ್ ಅಂತಿಮವಾಗಿ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವ ಚರ್ಚೆ ನಡೆದಿದೆ.
What do you feel about this post?
Like
Love
Happy
Haha
Sad





