ರಾಜ್ಯದ ಅಭಿವೃದ್ಧಿಯ ತೇರು ಎಳೆಯಲು ಎಲ್ಲರ ಕೈಗಳು ನನ್ನ ಜತೆ ಕೈಜೋಡಿಸಬೇಕು: ಸಿಎಂ ಡಿ. ಕೆ. ಶಿವಕುಮಾರ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಬೆಂಗಳೂರು: ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

<

ಮಾಣಿಕ್ ಷಾ ಮೈದಾನದಲ್ಲಿ ಶನಿವಾರ ನಡೆದ 80 ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣ ನೆರವೇರಿಸಿದ ನಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನನ್ನನ್ನು ನಂಬಿ ಇಲ್ಲಿಯವರೆಗೆ ಕರೆತಂದ ನಾಡಿನ ಜನತೆಗೆ ನಾನು ಸಾಕ್ಷಿಗುಡ್ಡೆ ಉಳಿಸುತ್ತೇನೆ. ಕರ್ನಾಟಕದ ಅಭಿವೃದ್ಧಿ ಮತ್ತು ಭಾರತದ ಅಭಿವೃದ್ಧಿ ಒಂದಕ್ಕೊಂದು ಪೂರಕವಾಗಿದ್ದು, ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ಕೃಷಿ, ಆರ್ಥಿಕತೆ ಹಾಗೂ ಸಂಸ್ಕೃತಿಯಲ್ಲಿ ದೇಶಕ್ಕೆ ದಾರಿ ತೋರಿಸುತ್ತಿರುವ ಕರ್ನಾಟಕದ ಶಕ್ತಿಯನ್ನು ಮತ್ತಷ್ಟು ಬೆಳೆಸುವುದು ಸರ್ಕಾರದ ಗುರಿ ಆಗಿದೆ ಎಂದು ಹೇಳಿದರು.

ರಾಜ್ಯದ ತಲಾ ಆದಾಯ 4.33 ಲಕ್ಷ ತಲುಪಿದ್ದು, ಜಿಎಸ್ಟಿ ಮತ್ತು ಆದಾಯ ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯದ 2ನೇ ಸ್ಥಾನದಲ್ಲಿದೆ. ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಮತ್ತು ಮೂಲ ಸೌಕರ್ಯಗಳಲ್ಲಿ ಹೂಡಿಕೆ ಮಾಡುವ ಮೂಲಕ 2047 ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು 3 ಟ್ರಿಲಿಯನ್ ಡಾಲರ್, 320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ ಎಂದರು.

ರೈತರ ಅನುಭವಕ್ಕೆ ಆಧುನಿಕ ತಂತ್ರಜ್ಞಾನವನ್ನು ಜೋಡಿಸಲು ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ ಜಾರಿ ಆಗಲಿದ್ದು, ಡ್ರೋಣ್ ಮತ್ತು ಉಪಗ್ರಹ ಚಿತ್ರಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುವುದು. ಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆಗೆ ಪಡೆಯಲು ರೈತ ಮಿತ್ರ ಯೋಜನೆ ಜಾರಿಗೊಳಿಸಲಾಗುವುದು. ಮೂರು ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಬಾಡಿಗೆ ಶುಲ್ಕದ ಮೇಲೆ ಶೇ 50 ರಷ್ಟು ಸಹಾಯಧನ ನೀಡಲಾಗುವುದು ಎಂದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *