ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರ, ಉತ್ತರ ಕನ್ನಡದ ಅಭಿವೃದ್ಧಿಗೆ ಹೊಸ ಚೈತನ್ಯ: ಮಾಜಿ ಶಾಸಕಿ ರೂಪಾಲಿ ನಾಯ್ಕ್

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಕನಸಾಗಿದ್ದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ಯೋಜನೆಯ ವಿದ್ಯುದ್ದೀಕರಣದೊಂದಿಗೆ ಬ್ರಾಡ್‌ಗೇಜ್ ರೈಲು ಮಾರ್ಗವಾಗಿ ಪರಿವರ್ತನೆಯಾಗುತ್ತಿರುವುದು ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ಮಹತ್ವದ ಬಲ ನೀಡಲಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರು ತಿಳಿಸಿದ್ದಾರೆ.

<

ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಗೂ ಜನರ ಸಂಪರ್ಕ ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಮಹತ್ವದ ಯೋಜನೆಯಾಗಿದೆ. ಈ ಮಾರ್ಗದ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಮತ್ತಷ್ಟು ಉತ್ತಮ ರೈಲು ಸಂಪರ್ಕ ದೊರೆಯುವ ನಿರೀಕ್ಷೆಯಿದೆ ಎಂದರು.

ಯೋಜನೆಯ ಸಾಕಾರಕ್ಕೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ. ಸೋಮಣ್ಣ ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುವೆ. ಇದೇ ವೇಳೆ, ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗಕ್ಕಾಗಿ ಬಹುಕಾಲದಿಂದ ಹೋರಾಟ ನಡೆಸಿಕೊಂಡು ಬಂದಿರುವ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಜಿಲ್ಲೆಯ ಪ್ರತಿಯೊಬ್ಬ ಹೋರಾಟಗಾರರಿಗೂ ಅಭಿನಂದನೆ ಸಲ್ಲಿಸುವೆ ಎಂದರು.

ರೈಲು ಮಾರ್ಗದ ಅಭಿವೃದ್ಧಿ ಹಾಗೂ ವಿದ್ಯುದ್ದೀಕರಣ ಪೂರ್ಣಗೊಂಡ ಬಳಿಕ ಉತ್ತರ ಕನ್ನಡದ ಕೈಗಾರಿಕೆ, ಪ್ರವಾಸೋದ್ಯಮ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ವೇಗ ದೊರೆಯುವ ಸಾಧ್ಯತೆಯಿದೆ. ಜಿಲ್ಲೆಯ ವಿವಿಧ ಭಾಗಗಳ ಜನರಿಗೆ ರಾಜ್ಯದ ಪ್ರಮುಖ ನಗರಗಳೊಂದಿಗೆ ಸಂಪರ್ಕವೂ ಮತ್ತಷ್ಟು ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *