ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಇದುವರೆಗೆ 11,23,004 ಎನ್ಯುಮರೇಷನ್ ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 11,23,004 ಫಾರ್ಮ್‌ಗಳ ಗಣಕೀಕರಣ ಪೂರ್ಣಗೊಂಡಿದೆ. ಮನೆ–ಮನೆ ಭೇಟಿ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,033 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,638 ಶಾಶ್ವತವಾಗಿ ಸ್ಥಳಾಂತರಗೊಂಡವರು, 44,029 ಮೃತಪಟ್ಟಿರುವವರು ಹಾಗೂ 12,689 ದ್ವಿಪ್ರತಿ ಪ್ರಕರಣಗಳು ಸೇರಿವೆ ಎಂದು ತಿಳಿಸಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%





