ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊಗೆ ಮಾತೃ ವಿಯೋಗ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಮಂಗಳೂರು: ಮೂಡುಜೆಪ್ಪು–ಕೆಲರಾಯಿ ನಿವಾಸಿ, ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಪತ್ನಿ ಪ್ರೆಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

<

ಪರೋಪಕಾರಿ ಸ್ವಭಾವದವರಾಗಿದ್ದ ಪ್ರೆಸಿಲ್ಲಾ ಮೊಂತೆರೊ ಅವರು ನೆರೆಹೊರೆಯವರು ಹಾಗೂ ಪರಿಚಿತರ ಜತೆಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಸರಳತೆ ಹಾಗೂ ಸೌಹಾರ್ದ ಸ್ವಭಾವದಿಂದ ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದ ಅವರು, ಕುಟುಂಬ ಹಾಗೂ ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗಿದ್ದರು.

ಮೃತರು ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಸೇರಿದಂತೆ ಮೂರು ಮಂದಿ ಪುತ್ರರು, ಮೂರು ಮಂದಿ ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.

ಅಂತ್ಯಕ್ರಿಯೆ: ಮೃತರ ಪಾರ್ಥಿವ ಶರೀರವನ್ನು ಆಗಸ್ಟ್ 21 ರಂದು ಬೆಳಗ್ಗೆ 10.30 ಕ್ಕೆ ಕೆಲರಾಯಿಯ ಸಂತ ಅನ್ನಾ ಚರ್ಚ್‌ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಬೆಳಗ್ಗೆ 11 ಗಂಟೆಗೆ ಚರ್ಚ್‌ನಲ್ಲಿ ಪವಿತ್ರ ಬಲಿಪೂಜೆ ನೆರವೇರಲಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *