ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪಾಲಿಕೆ ಕಮಿಷನರ್ ರಾಹುಲ್ ರತ್ನಂ ಪಾಂಡೆ ಅವರು ಮಂಗಳವಾರ ಪರಿಶೀಲಿಸಿದರು.
ಸುಲ್ತಾನ್ ಬತ್ತೇರಿ– ತಣ್ಣೀರುಬಾವಿ ಬೋ ಸ್ಟ್ರಿಂಗ್ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಆಯುಕ್ತರು, ಕಾಮಗಾರಿಯ ಪ್ರಗತಿ ಕುರಿತು ಸ್ಮಾರ್ಟ್ ಸಿಟಿ ಹಾಗೂ ಎಂಜಿನಿಯರಿಂಗ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುಲ್ತಾನ್ ಬತ್ತೇರಿ ಸುತ್ತಲಿನ ರಸ್ತೆಗಳಿಗೆ ಭೇಟಿ ನೀಡಿ ರಸ್ತೆ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೈಗೊಳ್ಳಲಾಗುತ್ತಿರುವ 450 ಮೀಟರ್ ಉದ್ದದ ನೇತ್ರಾವತಿ ವಾಟರ್‌ಫ್ರಂಟ್ ಅಭಿವೃದ್ಧಿ ಯೋಜನೆ ಸ್ಥಳಕ್ಕೂ ಭೇಟಿ ನೀಡಿದ ಅವರು, ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಸಂಭಾವ್ಯ ಅವಕಾಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ವೆಲೆನ್ಸಿಯಾ ಜೆರೋಸಾ ಶಾಲೆ ಸಮೀಪದಿಂದ ಸೂಟರ್‌ಪೇಟೆ ಸಂಪರ್ಕಿಸುವ ಮಾರ್ಗದಲ್ಲಿ ಎಂಜಿಎನ್ ವಿವೈ 2.0 ಯೋಜನೆ ಅಡಿ ಪ್ರಗತಿಯಲ್ಲಿರುವ ಕಾಂಕ್ರೀಟ್ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಯನ್ನು ಪರಿಶೀಲಿಸಿದ ಅವರು, ನಡೆಯುತ್ತಿರುವ ರಸ್ತೆ ಕಾಮಗಾರಿಯ ಪ್ರಗತಿ ಕುರಿತು ಎಂಜಿನಿಯರಿಂಗ್ ಅಧಿಕಾರಿಗಳು ಕಮಿಷನರ್ ಅವರಿಗೆ ಮಾಹಿತಿ ನೀಡಿದರು.
ಪರಿಶೀಲನೆಯ ವೇಳೆ ಪಾಲಿಕೆಯ ಎಂಜಿನಿಯರಿಂಗ್ ಹಾಗೂ ಸ್ಮಾರ್ಟ್ ಸಿಟಿ ಯೋಜನಾ ವಿಭಾಗದ ಅಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad





