ಕಾರವಾರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನವನ್ನು ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಪೂರ್ವಕವಾಗಿ ಆಚರಿಸಲಾಯಿತು.
ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ 82ನೇ ಹಾಗೂ ದೇವರಾಜ ಅರಸು ಅವರ 111ನೇ ಜನ್ಮದಿನೋತ್ಸವದ ಅಂಗವಾಗಿ ಇಬ್ಬರು ನಾಯಕರ ಭಾವಚಿತ್ರಗಳಿಗೆ ಪುಷ್ಪಹಾರ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜೀವ್ ಗಾಂಧಿ ಅವರು ದೇಶದ ಆಧುನೀಕರಣ, ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ ಹಾಗೂ ಯುವಜನರ ಸಬಲೀಕರಣಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಭೂ ಸುಧಾರಣೆ ಕ್ಷೇತ್ರದಲ್ಲಿ ಕೈಗೊಂಡ ಐತಿಹಾಸಿಕ ಕ್ರಮಗಳನ್ನು ನೆನಪಿಸಿಕೊಂಡರು.
ಇಬ್ಬರು ನಾಯಕರ ಜನಪರ ಚಿಂತನೆ ಹಾಗೂ ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆಗಳು ಇಂದಿಗೂ ಸ್ಮರಣೀಯವಾಗಿವೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಮಾಜಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.
What do you feel about this post?
Like
Love
Happy
Haha
Sad





