ಪತ್ರಕರ್ತನ ಮೇಲೆ ಹಲ್ಲೆ: ಕುಂದಾಪುರ ಸರ್ಕಾರಿ ವೈದ್ಯ ಅಮಾನತು, ಕಮಿಷನರ್ ಆದೇಶ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಉಡುಪಿ: ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಿಷನರ್ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

<

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸುವ ಮೂಲಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನದ ಆರೋಪಗಳ ಕುರಿತು ಇಲಾಖೆ ವಿಚಾರಣೆ ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಯುಕ್ತರು ಪ್ರದತ್ತ ಆಗಿರುವ ಅಧಿಕಾರವನ್ನು ಚಲಾಯಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇಲಾಖಾ ವಿಚಾರಣೆ ಪೂರ್ಣಗೊಳ್ಳುವವರೆಗೆ ಅಮಾನತು ಆದೇಶ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *