ಕಾರವಾರ: ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಪ್ರಥಮ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಉದ್ದೇಶ ಮತ್ತು ಕಾರ್ಯಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಯಿತು.
ಗ್ರಾಹಕರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಗ್ರಾಹಕರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಗ್ರಾಹಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಮೂಲಕ ವಂಚನೆ ಹಾಗೂ ಅನ್ಯಾಯಕ್ಕೆ ಒಳಗಾಗುವುದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಮಂಜುನಾಥೇಶ್ವರ ಗಣಪತಿ ಗೋಳಿಕಟ್ಟೆ, ಲೋಕೇಶ್ ಲಕ್ಷ್ಮೀನಾರಾಯಣ ಹೆಗಡೆ ಭಂಡಿವಾಳ, ಜಿ.ಜಿ. ಹೆಗಡೆ ಕಡೇಕೋಣೆ ಸೇರಿದಂತೆ ಪರಿಷತ್‌ನ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
What do you feel about this post?
Like
Love
Happy
Haha
Sad





