ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ಪರಿಶೀಲನೆ ನಡೆಸಿದರು.
ಪರಿಶೀಲನೆಯ ಸಂದರ್ಭದಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಅಂಶಗಳನ್ನು ಅಧಿಕಾರಿಗಳು ಪರಿಶೀಲಿಸಿ, ಅಗತ್ಯವಿರುವ ಮಾದರಿಗಳನ್ನು ಸಂಗ್ರಹಿಸಿ ಮುಂದಿನ ಕಾನೂನು ಕ್ರಮಕ್ಕಾಗಿ ಕಳುಹಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರೆ ಆಹಾರ ಸಂಸ್ಥೆಗಳ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರು ಆಹಾರದ ಗುಣಮಟ್ಟ, ಸ್ವಚ್ಛತೆ ಅಥವಾ ಆಹಾರ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ಇಲಾಖೆಯ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ದೂರು ಸಲ್ಲಿಸುವಂತೆ ಮನವಿ ಮಾಡಲಾಗಿದೆ.
What do you feel about this post?
Like
Love
Happy
Haha
Sad





