ವಂದೇ ಮಾತರಂಗೆ ಅಡ್ಡಿ, ಕಾಂಗ್ರೆಸ್ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ: ಶಾಸಕ ಕಾಮತ್

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ‘ವಂದೇ ಮಾತರಂ’ನ ಎರಡು ಚರಣಗಳನ್ನು ಮಾತ್ರ ಹಾಡುತ್ತೇವೆ, ಪೂರ್ಣ ಗೀತೆಯನ್ನು ಹಾಡುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸಂಸತ್ತು ಅಂಗೀಕರಿಸಿರುವ ಕಾನೂನನ್ನು ವಿರೋಧಿಸುತ್ತಿದೆ. ಕೇವಲ ಓಲೈಕೆ ರಾಜಕಾರಣಕ್ಕಾಗಿ ಕೈಗೊಳ್ಳುತ್ತಿರುವ ಇಂತಹ ನಿಲುವು ಕಾಂಗ್ರೆಸ್‌ನ ದೇಶವಿರೋಧಿ ಮನಸ್ಥಿತಿ ಹಾಗೂ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

<

ವಂದೇ ಮಾತರಂ ಕೇವಲ ನಾಲ್ಕು ಸಾಲುಗಳ ಹಾಡಲ್ಲ. ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಡುವ ಸಂದರ್ಭದಲ್ಲಿ ಮೊಳಗಿಸಿದ ಪವಿತ್ರ ಮಂತ್ರವಾಗಿದೆ. ಬ್ರಿಟಿಷರ ಲಾಠಿ, ಬಂದೂಕುಗಳಿಗೂ ಜಗ್ಗದೆ ಸ್ವಾತಂತ್ರ್ಯ ಹೋರಾಟಗಾರರಲ್ಲಿ ದೇಶಭಕ್ತಿಯ ಕಿಚ್ಚು ಹೊತ್ತಿಸಿದ ಈ ಗೀತೆಯನ್ನು ಮತಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ವಿರೋಧಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದ್ದಾರೆ.

ದೇಶದ ಏಕತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುವವರು ಯಾವುದೇ ಕ್ಷಮೆಗೆ ಅರ್ಹರಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂಗೆ ಕತ್ತರಿ ಹಾಕುವ ಮೂಲಕ ಕಾಂಗ್ರೆಸ್ ದೊಡ್ಡ ಪ್ರಮಾದ ಎಸಗಿತ್ತು ಎಂದು ಆರೋಪಿಸಿದ್ದಾರೆ.

ಇತಿಹಾಸದಲ್ಲಿ ನಡೆದ ತಪ್ಪುಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂದೊಂದಾಗಿ ಸರಿಪಡಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತೆ ತುಷ್ಟೀಕರಣದ ರಾಜಕಾರಣಕ್ಕೆ ಮುಂದಾಗಿರುವುದು ಖಂಡನೀಯ. ದೇಶದ ಕಾನೂನು ಹಾಗೂ ಸಾರ್ವಭೌಮತ್ವಕ್ಕೆ ಸವಾಲು ಹಾಕುವ ಇಂತಹ ನಿಲುವನ್ನು ಜನತೆ ತಿರಸ್ಕರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *