ಮುಕ್ಕ ಕ್ಯಾಂಪಸ್‌ನಲ್ಲಿ ವನಮಹೋತ್ಸವ, ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳ ಸಂಕಲ್ಪ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು

Spread the love

ಮಂಗಳೂರು: ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯ ಕುರಿತು ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಆಶ್ರಯದಲ್ಲಿ ಮುಕ್ಕ ಕ್ಯಾಂಪಸ್‌ನಲ್ಲಿ ವನಮಹೋತ್ಸವ–2026 ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

<

ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪರಿಸರ ಕ್ಲಬ್ ಸಹಯೋಗದಲ್ಲಿ ಆ.14ರಂದು ನಡೆದ ಕಾರ್ಯಕ್ರಮಕ್ಕೆ ಆಹಾರ ವಿಜ್ಞಾನ ವಿಭಾಗದ ಕೋರ್ಸ್ ಸಂಯೋಜಕಿ ಡಾ.ಸ್ವಾತಿ ಡಿ. ಸ್ವಾಗತಿಸಿದರು.

ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎ.ಶ್ರೀನಿವಾಸ ರಾವ್ ಅವರು ಮೊದಲ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸಿರು ಹಾಗೂ ಸುಸ್ಥಿರ ಕ್ಯಾಂಪಸ್ ನಿರ್ಮಿಸುವ ಆಶಯದೊಂದಿಗೆ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.

ವಿಶ್ವವಿದ್ಯಾಲಯದ ಅಭಿವೃದ್ಧಿ ವಿಭಾಗದ ಕುಲಸಚಿವ ಡಾ.ಅಜಯ್ ಕುಮಾರ್, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಡೀನ್ ಡಾ.ರಾಮಕೃಷ್ಣ ಹೆಗಡೆ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಡೀನ್ ಡಾ.ಪವನ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಸಂಸ್ಥೆಗಳ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ವಿವಿಧ ಬಗೆಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಹೊಣೆಗಾರಿಕೆ ಮೆರೆದರು. ಕ್ಯಾಂಪಸ್‌ನ್ನು ಹಸಿರಾಗಿಸುವ ನಿಟ್ಟಿನಲ್ಲಿ ಸಸಿಗಳ ಸಂರಕ್ಷಣೆ ಮತ್ತು ಪೋಷಣೆಗೆ ಆದ್ಯತೆ ನೀಡುವ ಸಂಕಲ್ಪ ಕೈಗೊಂಡರು.

ಕಾರ್ಯಕ್ರಮವನ್ನು ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕ ತ್ರಿವಿಕ್ರಮ್ ಪ್ರಭು ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಪರಿಸರ ಕ್ಲಬ್ ಸಂಯೋಜಕ ವಿಖ್ಯಾತ್ ಬಂಗೇರ ಎಸ್. ಸಂಯೋಜಿಸಿದರು. ಎರಡೂ ಸಂಸ್ಥೆಗಳ ಬೋಧಕ ಸಿಬ್ಬಂದಿ, ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *