ಮಂಗಳೂರು/ ಉಡುಪಿ: ಈದ್ ಮಿಲಾದ್ ಆಚರಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.26 ರ ಬದಲಿಗೆ ಆ.25 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿ ಅವರ ಕೋರಿಕೆ ಮೇರೆಗೆ ಆ.25 ರಂದು ಸಾರ್ವತ್ರಿಕ ರಜೆ ಘೋಷಿಸುವ ಕುರಿತು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆ.25ರಂದು ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.


