ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, ಆರು ಮಂದಿ ಮೀನುಗಾರರ ರಕ್ಷಣೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ದೇಶ ವಿದೇಶ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಮೀನುಗಾರಿಕೆಗೆ ತೆರಳುತ್ತಿದ್ದ ಟ್ರಾಲರ್ ಬೋಟ್‌ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಸಂಜೆ ಮಂಗಳೂರಿನ ಹಳೆ ಬಂದರಿನ ಸಮೀಪ ನಡೆದಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಬೋಟ್‌ಗಳ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

<

ಬಂಟ್ವಾಳ ತಾಲೂಕಿನ ಇಬ್ರಾಹಿಂ ಖಲೀಲ್ ಮೂಸಾ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಟ್ರಾಲರ್ ಬೋಟ್‌ (ನೋಂದಣಿ ಸಂಖ್ಯೆ: IND-KA-01-MM-3992) ಮಂಗಳೂರು ಹಳೆ ಬಂದರಿನಿಂದ ದಡದ ಸಮೀಪದ ಮೀನುಗಾರಿಕೆಗೆ ತೆರಳುತ್ತಿತ್ತು. ಅಳಿವೆಬಾಗಿಲು ದಾಟಿದ ಕೆಲವೇ ಕ್ಷಣಗಳಲ್ಲಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗಿ, ಭಾರಿ ಅಲೆಗಳು ಬೋಟ್‌ಗೆ ಅಪ್ಪಳಿಸಿವೆ. ಪರಿಣಾಮ ಬೋಟ್ ನಿಯಂತ್ರಣ ಕಳೆದುಕೊಂಡು ಮುಳುಗಲು ಆರಂಭಿಸಿದೆ.

ಬೋಟ್ ಮುಳುಗುತ್ತಿರುವುದನ್ನು ಗಮನಿಸಿದ ಸಮೀಪದ ಇತರ ಬೋಟ್‌ಗಳಲ್ಲಿದ್ದ ಮೀನುಗಾರರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಹಗ್ಗ ಹಾಗೂ ರಕ್ಷಣಾ ಸಾಧನಗಳ ನೆರವಿನಿಂದ ಬೋಟ್‌ನಲ್ಲಿದ್ದ ಆರು ಮಂದಿ ಸಿಬ್ಬಂದಿಯನ್ನು ತಮ್ಮ ಬೋಟ್‌ಗಳಿಗೆ ಎತ್ತಿಕೊಂಡು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

15.10 ಮೀಟರ್ ಉದ್ದದ ‘ಅಯಾನ್’ ಬೋಟ್ ಮುಳುಗುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೋಟ್‌ನ ಮುಂಭಾಗ ಮಾತ್ರ ನೀರಿನ ಮೇಲೆ ಕಾಣಿಸುತ್ತಿದ್ದು, ಉಳಿದ ಭಾಗ ಸಮುದ್ರದಲ್ಲಿ ಮುಳುಗುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

‘ಮಂಗಳೂರು ದಕ್ಕೆಯಿಂದ ಕರೆ ಫಿಶಿಂಗ್‌ಗೆ ಹೊರಟಿದ್ದ ಇಬ್ರಾಹಿಂ ಮೂಸಾ ಅವರಿಗೆ ಸೇರಿದ ಸುಮಾರು 15 ಮೀಟರ್ ಉದ್ದದ ‘ಅಯಾನ್’ ಬೋಟ್ ಅಳಿವೆಬಾಗಿಲು ದಾಟುತ್ತಿದ್ದಂತೆ ಗಾಳಿಯ ವೇಗ ಹೆಚ್ಚಾಗಿ ಮುಳುಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ತಕ್ಷಣ ರಕ್ಷಿಸಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ. ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *