ಬಂಟ್ಸ್ ಹಾಸ್ಟೆಲ್‌ನಲ್ಲಿ ಸೆ.14 ರಿಂದ ಗಣೇಶೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಬಂಟ್ಸ್ ಹಾಸ್ಟೆಲ್‌ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸೆ.14 ರಿಂದ 16 ರವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

<

ಶ್ರೀಮತಿ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸನಾತನ ಧರ್ಮ ಅತ್ಯಂತ ಶ್ರೇಷ್ಠವಾದುದು. ಈ ಹೆಮ್ಮೆಯ ಜತೆಗೆ ನಮ್ಮ ಜಾತಿಯ ಬಗ್ಗೆಯೂ ಅಭಿಮಾನ ಹೊಂದಬೇಕು. ಎರಡು ದಶಕಗಳಿಂದ ವಿಭಿನ್ನ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿರುವ ಗಣೇಶೋತ್ಸವದಲ್ಲಿ ಮಕ್ಕಳು ಮತ್ತು ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು’ ಎಂದರು.

ಸಿದ್ಧಿವಿನಾಯಕ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ‘ಪ್ರತಿಫಲದ ಅಪೇಕ್ಷೆಯಿಲ್ಲದೆ ದುಡಿಯುವ ನೂರಾರು ಕಾರ್ಯಕರ್ತರ ಶ್ರಮದಿಂದ ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತಿದೆ. ಸಮಸ್ತ ಸಮಾಜದ ಒಗ್ಗಟ್ಟಿಗೆ ಗಣೇಶೋತ್ಸವ ಪ್ರೇರಣೆಯಾಗಲಿ’ ಎಂದರು.

ಸೀಮಾ ಜಗದೀಶ್ ಶೇಣವ ಮುಖ್ಯ ಅತಿಥಿಯಾಗಿದ್ದರು. ಗಣೇಶೋತ್ಸವದ ಅಂಗವಾಗಿ ನಡೆಯಲಿರುವ ಹೊರೆಕಾಣಿಕೆ, ಅನ್ನಸಂತರ್ಪಣೆ, ಕ್ರೀಡಾಕೂಟ, ಬಂಟ ಕಲಾ ಸಂಗಮ, ಭಜನಾ ತಂಡ ಹಾಗೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಸಂಚಾಲಕರಾದ ಅಶ್ವತ್ತಾಮ ಹೆಗ್ಡೆ, ಸಂಭ್ರಮ ಶೆಟ್ಟಿ, ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ಸಂತೋಷ್ ಶೆಟ್ಟಿ ಶೆಡ್ಡೆ ಹಾಗೂ ದಿವಾಕರ ಸಾಮಾನಿ ಚೇಳಾರ್ ಗುತ್ತು ಮಾಹಿತಿ ನೀಡಿದರು.

ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಪದ್ಮನಾಭ ಶೆಟ್ಟಿ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣಪ್ರಸಾದ್ ರೈ, ಡಾ. ಆಶಾ ಜ್ಯೋತಿ ರೈ, ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಹಾಗೂ ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಇದ್ದರು.

ಜಯಶೀಲ ಅಡ್ಯಂತಾಯ ಸ್ವಾಗತಿಸಿದರು. ಸಮಿತಿಯ ಸಮನ್ವಯಕಾರ ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್ ನಿರೂಪಿಸಿದರು. ಕ್ರೀಡಾ ಸಮಿತಿ ಸಂಚಾಲಕ ಜಗದೀಶ್ ಶೆಟ್ಟಿ ಬಿಜೈ ವಂದಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *